ತೆರವು ವಿಚಾರದಲ್ಲಿ ಗೊಂದಲ: ಅಶೋಕ ಆಕ್ರೋಶ

ಬೆಂಗಳೂರು: ಕೆರೆ ಒತ್ತುವರಿ ತೆರವು ಕಾರ್ಯಚರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ತಕ್ಷಣ ಶ್ವೇತಪತ್ರ ಹೊರಡಿಸಬೇಕು ಎಂದು ಮಾಜಿ ಉಪಮುಖ್ಯ ಮಂತ್ರಿ ಆರ್.ಅಶೋಕ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆರೆ ಒತ್ತುವರಿ ತೆರವು ಎಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಹೇಳಿಕೆ ನೀಡಿದರೆ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಇನ್ನೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಸಾರ್ವಜನಿಕರಲ್ಲಿ ಗೊಂದಲ ಮೂಡಿದ್ರು, ತಕ್ಷಣ ಶ್ವೇತವತ್ರ ಹೊರಡಿಸಬೇಕು’ ಎಂದು ಆಗ್ರಹಿಸಿದರು.

ಒತ್ತುವರಿ ತೆರವು ಕಾರ್ಯ ముందువరియలిటి ఎందు ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಸತಿ ಕಟ್ಟಡಗಳನ್ನು ತೆರವುಗೊಳಿಸುವುದಿಲ್ಲ, ಕೇವಲ ವಾಣಿಜ್ಯ ಕಟ್ಟಡಗಳನ್ನು ಮಾತ್ರ ತೆರವುಗೊಳಿಸಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳುತ್ತಾರೆ. ಇಲ್ಲಿವರೆಗೆ ವಾಣಿಜ್ಯ ಕಟ್ಟಡಗಳನ್ನು ಮಾತ್ರ ನೆಲಸಮ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳುತ್ತಾರೆ. ಈ ಮಧ್ಯೆ ‘ನಿರ್ಜಿವ’ ಕೆರೆಗಳಲ್ಲಿನ ಬಡಾವಣೆಗಳನ್ನು ಸಕ್ರಮಕ್ಕೆ ವಿಧೇಯಕ ತರಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳುತ್ತಿದ್ದಾರೆ. ಹೀಗಾಗಿ ಸರ್ಕಾರ ಈ ಎಲ್ಲ ಗೊಂದಲಗಳಿಗೆ ಶ್ವೇತಪತ್ರದ ಮೂಲಕ ಉತ್ತರ ನೀಡಬೇಕಿದೆ ಎಂದು ಆಗ್ರಹಿಸಿದರು.

= ಅಧಿವೇಶನಕ್ಕೆ ಒತ್ತಾಯ

ಒತ್ತುವರಿ ತೆರವಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಅದಕ್ಕಿಂತ ಮುಂಚೆ ಸರ್ವೆ ಆಗಬೇಕಿತ್ತು. ಆದರೆ ‘ಬುಲ್ಡ್ಜರ್’ ಮನಸ್ಥಿತಿಯ ಸರ್ಕಾರ ಬಡವರನ್ನು ಆತಂತ್ರರನ್ನಾಗಿಸಿದೆ. ಕೆರೆ ಒತ್ತುವರಿ

ಒತ್ತುವರಿ ತೆರವಿಗೆ ದೊರೆಸ್ವಾಮಿ ಬೆಂಬಲ

ಬೆಂಗಳೂರು: ಕೆರೆ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅಭಿನಂದಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನು ಭೇಟಿ ಮಾಡಿದ ಅವರು, ಈ ವಿಚಾರದಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಕ್ಕೆ ನನ್ನ ಬೆಂಬಲ ಇದೆ ಎಂದು ಹೇಳಿದ್ದಾರೆ.

ತೆರವು ಸಂಬಂಧ ಸದನ ಸಮಿತಿ ವರದಿ ಬರುವವರೆಗೆ ಸರ್ಕಾರ ಕಾದು ನೋಡುವ ಬದಲು ನಿರ್ದಯವಾಗಿ ನಡೆದುಕೊಂಡಿದೆ. ಸುಮಾರು 10 ಸಾವಿರ ಕುಟುಂಬಗಳು ಬೀದಿಗೆ ಬಂದಿದ್ದು ಈ ಬಗ್ಗೆ ಚರ್ಚೆ ನಡೆಸುವುದಕ್ಕೆ ವಿಶೇಷ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿದರು.

॥ ಸುಪ್ರೀಂನಿಂದ ತಪರಾಕಿ

ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದಂತಾಗಿದೆ. ಸೋಲಿನ ಭೀತಿಯಿಂದ ವಾಮ ಮಾರ್ಗ ಬಳಸಿಕೊಂಡು ಚುನಾವಣೆ ಮುಂದೂಡಲು ಪ್ರಯತ್ನಿಸಿದ್ದ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ನ್ಯಾಯಾಲಯದ ತೀರ್ಪಿನ ಪ್ರಕಾರ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಬೇಕು ಎಂದು ಅಶೋಕ ಆಗ್ರಹಿಸಿದರು.

Leave a Reply

Your email address will not be published. Required fields are marked *

seven + 9 =